
ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡ ಘಟನೆ ನಡೆದಿದೆ.
ಶನಿವಾರ ಬೆಳ್ಳಂ ಬೆಳಿಗ್ಗೆ ಕಾನೂನು ಸುವ್ಯವಸ್ಥೆ ಡಿಸಿಪಿ ರೋಹನ ಜಗದೀಶ್ ನೇತೃತ್ವದ ತಂಡ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದಲ್ಲಿ ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ 25 ಬ್ಯಾರಲ್ ಗಳಲ್ಲಿ ತುಂಬಿದ್ದ ಕಳ್ಳಬಟ್ಟಿ ಹಾಗೂ 10 ಅಲ್ಯೂಮಿನಿಯಂ ಪಾತ್ರೆಯಲ್ಲಿ ತುಂಬಿದ್ದ ಸುಮಾರು 5700 ಲೀಟರ್ ಕಳ್ಳಬಟ್ಟಿಯನ್ನು ವಶಕ್ಕೆ ಪಡೆದು ನಾಶಪಡಿಸಿದ್ದಾರೆ.
ಸುಮಾರು 100 ಕ್ಕೂ ಅಧಿಕ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ಸೋನಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ತಗೆದಯುತ್ತಿದ್ದ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಆರೋಪಿಗಳೆಲ್ಲ ತಲೆಮರೆಸಿಕೊಂಡಿದ್ದು ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಎಸ್. ಎನ್ ಸಿದ್ದರಾಮಪ್ಪ ಅವರು.
ಅಕ್ರಮವಾಗಿ ಕಳ್ಳಬಟ್ಟಿ ತೆಗೆಯುವ ಮಾಹಿತಿ ಸುಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ ಡಿಸಿಪಿ ನೇತೃತ್ವದದಲ್ಲಿ ಅನೇಕ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಮದ್ಯ ನಾಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರ ಆರೋಗ್ಯಕ್ಕೆ ಮಾರಕವಾಗುವ ಕಳ್ಳಬಟ್ಟಿ ಅಡ್ಡೆಗಳನ್ನು ಹುಡುಕಿ ನಾಶ ಪಡಿಸಲಾಗುತ್ತದೆ ಎಂದು ಹೇಳಿದರು
ಘಟನೆಗೆ ಸಂಬಂಧಪಟ್ಟಂತೆ ಆರೋಪಿತರಾದ ಸಿದ್ರಾಯಿ ರಾಜಕಟ್ಟಿ, ಶೆಟ್ಟೆವ್ವ ರಾಜಕಟ್ಟಿ, ಸಿದ್ದಪ್ಪ ಪನಗುದ್ದಿ, ಬಾಳಪ್ಪ ಮುಚ್ಚಂಡಿ ಎಂಬುವವರ ಮೇಲೆ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದೆದೆ.


