ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!

WhatsApp Group Join Now

ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!
ಮಂಡ್ಯ ಮನೆ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಕಾನ್ಸ್ಟೇಬಲ್ ಕೆಂಡಗಣ್ಣಯ್ಯ, ಡಾಲಿ, ಭವನ್, ಸಾದನ್, ಅಯೂಬ್, ಮುನ್ನಾ, ಪ್ರಸಾದ್, ಫಯಾಜ್ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ1 ಕೆಜಿ 486ಗ್ರಾಂ ಚಿನ್ನಾಭರಣ, 1.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಮನೆಗಳ್ಳತನ ಆರೋಪಿಗಳಿಗೆ ಪಿಸಿ ಕೆಂಡಗಣ್ಣಯ್ಯ ಸಹಾಯ ಮಾಡುತ್ತಿದ್ದರು. ಕಳೆದ ತಿಂಗಳು ಮದ್ದೂರಿನಲ್ಲಿ ವೈದ್ಯ ಚಂದ್ರು ಮನೆಯಲ್ಲಿ ಕಳ್ಳತನ ನಡೆದಿದ್ದು, ಆರೋಪಿಗಳು1 ಕೆಜಿ ಚಿನ್ನಾಭರಣ ಹಾಗೂ 8 ಲಕ್ಷ ರೂ. ನಗದು ದೋಚಿದ್ದರು. ಬಂಧಿತ 8 ಆರೋಪಿಗಳಿಂದ 5 ಮನೆಗಳ್ಳತನ ಪ್ರಕರಣಗಳು ಬಯಲಾಗಿದೆ. ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳಿಗೆ ಪಿಸಿ ಕೆಂಡಗಣ್ಣಯ್ಯ ಸಾಥ್ ನೀಡುತ್ತಿದ್ದರು. ಆರೋಪಿಗಳು ಕದ್ದ ಚಿನ್ನಾಭರಣವನ್ನು ಕೆಂಡಗಣ್ಣಯ್ಯ ಅಡವಿಟ್ಟು ಕೊಡುತ್ತಿದ್ದರು. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು.

About The Author