12 August 2026
Advertisement
ರಾಜ್ಯ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಕೆರೆಯ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ

WhatsApp Group Join Now

ದಾವಣಗೆರೆ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ
ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆ
ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ
ನಡೆದಿದೆ.
ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತವ್ಯಕ್ತಿ. ನಿತ್ಯ
ಮೀನು ಹಿಡಿದು ಜೀವನ ಸಾಗಿಸುತ್ತಿದ್ದ ಮೂರ್ತಿ ಎಂದಿನಂತೆ
ಮೀನು ಹಿಡಿಯಲು ತೆಪ್ಪದಲ್ಲಿ ಹೋಗಿದ್ದ ವೇಳೆ ಇದ್ದಕ್ಕಿದ್ದಂತೆ
ತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ
ಸಾವನ್ನಪ್ಪಿದ್ದಾರೆ.
ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ನೀರಿನಲ್ಲಿ ಮುಳುಗಿ
ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಈತನ ಮೃತದೇಹವನ್ನು
ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

About The Author