
ರಾಮದುರ್ಗ ತಾಲೂಕಿನಾದ್ಯಂತ ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, 23 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಮದುರ್ಗ ತಾಲೂಕಿನ 14 ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟು 4080 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಅದರಲ್ಲಿ 4057 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಬೆಳಗಾವಿಯ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಹಾಗೂ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೀಕ್ಷಕರಿಂದ ವೆಬ್ ಕಾಸ್ಟಿಂಗ್ ಮಾಡಲಾಗಿದೆ ಎಂಧು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ತಿಳಿಸಿದ್ದಾರೆ.
ತಹಸೀಲ್ದಾರ್ ಸುರೇಶ ಚವಲಾರ, ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂರು ತಂಡದಲ್ಲಿ ವಿಚಕ್ಷಕ ದಳದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.


