ಡಾ| ಬಾಬುಜಗಜೀವನರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ್ ಚವಲಾರ ಉದ್ಘಾಟಿಸಿದರು.

WhatsApp Group Join Now

ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಹಸಿರು ಕಾಂತ್ರಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಸುರೇಶ ಚವಲಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಾಕಷ್ಟು ಸಂಕಷ್ಟಗಳನ್ನು ಎದುರಿಸಿ ದೇಶದ ಅತ್ಯನ್ನತ ಸ್ಥಾನಗಳನ್ನು ಅಲಂಕರಿಸಿದ ಡಾ| ಬಾಬು ಜಗಜೀವನರಾಂ ಅವರ ಜಯಂತಿ ಅರ್ಥಪೂರ್ಣವಾಗ ಬೇಕದಾರೆ ಅವರ ಆದರ್ಶಗಳನ್ನು ನಾವೇಲ್ಲಾ ಪಾಲಿಸಿ ಅವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧ್ಯ ಎಂದು ತಹಶೀಲ್ದಾರ ಸುರೇಶ ಚವಲಾರ ಹೇಳಿದರು.

ತಾಲೂಕ ಪಂಚಾಯತ ಇಒ ಬಸವರಾಜ ಐನಾಪೂರ ಮಾತನಾಡಿ, ದಮನಿತ ವರ್ಗದಿಂದ ಬಂದಿರುವ ಡಾ| ಬಾಬು ಜಗಜೀವನರಾಮ್ ಅವರು ಹೋರಾಟದ ಮೂಲಕ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದರು.
ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಮಾತನಾಡಿ, ಜಯಂತಿ ಆಚರಣೆ ಸಂದರ್ಭದಲ್ಲಿ ಉಪನ್ಯಾಸಕರು ನೀಡಿದ ಸಂದೇಶವನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಮುಂಚೂನಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ಸುನಂದಾ ವಾಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಸಂತ ಚಿನಿವಾಲರ ನಿರೂಪಿಸಿದರು. ಪಾಂಡು ಲಮಾಣಿ ವಂದಿಸಿದರು.
ಈ ಸಂದರ್ಭದಲಿ ಶಿಕ್ಷಣ ಸಂಯೋಜಕ ಶ್ರೀಕಾಂತ ಕರಲಿಂಗಪ್ಪನವರ ಉಪನ್ಯಾಸ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಐ.ಕೆ. ಗುಡದಾರಿ, ತಾಲೂಕಾ ಪಟ್ಟಣದ ವಿವಿಧ ಅಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

About The Author