ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೇಟ್ಟರ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ.

WhatsApp Group Join Now

ರಾಮದುರ್ಗ ಕಳೆದ ವಿಧಾನಸಬೆ ಚುನಾವಣೆಯಲ್ಲಿ ಟಿಕೇಟ್ ನೀಡದ ಕಾರಣ ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ನಿವಾಸಕ್ಕೆ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಅವರು ಭೇಟಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾಗಿರುವ ಕಹಿ ಘಟನೆಗಳನ್ನು ಮರೆತುವ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಆ ನಿಟ್ಟಿನಲ್ಲಿ ಮತ್ತೇ ತಾವು ಪಕ್ಷದ ಸಂಘಟನೆಯಲ್ಲಿ ತೊಡಗಿ ಬಿಜೆಪಿ ಗೆಲವಿಗೆ ಸಹಕರಿಸುವಂತೆ ಮುಖಂಡರ ಒತ್ತಾಯಕ್ಕೆ ಮಣಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವದಾಗಿ ಸಮ್ಮತಿಸಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಗದೀಶ ಶೆಟ್ಟರ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಡೆದ ಕಹಿ ಘಟನೆಗಳನ್ನು ಮರೆತು ಪಕ್ಷದ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಮಹಾದೇವಪ್ಪ ಯಾದವಾಡ ಅವರ ಮನವೊಲಿಸಿದ್ದು, ಅವರ ಸಹ ಸಮ್ಮತಿಸಿ ಪ್ರಚಾರ ಕಾರ್ಯಕದಲ್ಲಿ ತೊಡಗಲಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ಏನೆ ಸಮಸ್ಯೆಗಳಿದ್ದರು ಅವುಗಳನ್ನು ಮುಖಂಡರ ಸಮ್ಮಖದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವದು. ಇನ್ನೂ ಮೇಲೆ ತಾಲೂಕಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಗೆಲವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕೈಬಲಪಡಿಸುವ ನಿಟ್ಟಿನಲ್ಲಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಮತ್ತು ಮುಖಂಡರ ಒತ್ತಾಯದ ಮೆರಗೆ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷದ ಕಾರ್ಯದಲ್ಲಿ ತೊಡಗಿಕೊಳ್ಳಲಾಗುವದು. ಅಲ್ಲದೇ ಈ ಭಾರಿ ೩೦ ಸಾವಿರಕ್ಕಿಂತ ಅಧಿಕ ಮತಗಳ ಲೀಡ್‌ನ್ನು ಜಗದೀಶ ಶೆಟ್ಟರ ಅವರಿಗೆ ತಂದು ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು, ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುತ್ತಾರೆ. ಅಂತವರ ಬಗ್ಗೆ ಎಚ್ಚರ ವಹಿಸಿ ಜಿಲ್ಲೆಯ ಮುಖಂಡರು ಜವಾಬ್ದಾರಿಯಿಂದ ಯಾರಿಗೂ ಅಸಮಾಧನವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಧನಲಕ್ಷಿö್ಮÃ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಬಿಜೆಪಿ ತಾಲೂಕಾಧ್ಯಕ್ಷ ರಾಜೇಶ ಬೀಳಗಿ, ಮಾಜಿ ಜಿ.ಪಂ ಸದಸ್ಯ ಮಾರುತಿ ತುಪ್ಪದ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಸ್. ಢವಣ, ಮುಖಂಡರಾದ ಬಿ.ಎಂ. ತುಪ್ಪದ, ಅಪ್ಪಶಿಗೌಡ ಪಾಟೀಲ, ಜಗದೀಶ ಲಾಹೋಟಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.

About The Author