10/04/2024 ರಂದು 2023-24 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

WhatsApp Group Join Now

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ದಿನಾಂಕ 10/04/2024 ರಂದು ಬೆಳಗ್ಗೆ 11 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ
ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು

About The Author