ಬೆಳಗಾವಿಯಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿದ ಜಗದೀಶ್ ಶೆಟ್ಟರ್ 

WhatsApp Group Join Now

ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಚುನಾವಣಾ ಹಿನ್ನೆಲೆಯಲ್ಲಿ ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿರುವ ಅವರು, ಇಂದು ಗೃಹ ಪ್ರವೇಶ ನೆರವೇರಿಸಿದ್ದಾರೆ.

ಯುಗಾದಿ ಹಿನ್ನೆಲೆ ಬೆಳಗಾವಿಯಲ್ಲಿ ಗೃಹ ಪ್ರವೇಶ ಮಾಡಿದ್ದೇನೆ. ಬೆಳಗಾವಿಯಲ್ಲಿ ನಾನು ಕಚೇರಿಯನ್ನೂ ತೆರೆಯುತ್ತೇನೆ. ವಿಪಕ್ಷದವರಿಗೆ ಉತ್ತರ ಕೊಡುವುದಕ್ಕೆ ಮನೆ ಮಾಡಿಲ್ಲ. ನಾನು ಮನೆ ಮಾಡುವುದಾಗಿ ಹೇಳಿದ್ದೆ, ಮಾಡಿದ್ದೇನೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಹೋದಾಗ ಬಿಜೆಪಿಗೆ ಬೈದಿಲ್ಲ. ಪ್ರಧಾನಿ ಮೋದಿ, ಬಿಎಸ್​ ಯಡಿಯೂರಪ್ಪ, ಬಿಜೆಪಿ ಪಕ್ಷ ಟೀಕಿಸಿಲ್ಲ. ಸುಮ್ಮನೆ ಸುಳ್ಳು ಹೇಳಿಕೆ ನೀಡಬಾರದು. ನಾನು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಟೀಕೆ ಮಾಡುವುದಿಲ್ಲ.
ಟೀಕಿಸಿದರೆ ದೊಡ್ಡವರಾಗಬಹುದೆಂದು ಟೀಕಿಸುತ್ತಿರಬಹುದು. ಬೆಳಗಾವಿಯಲ್ಲಿ ನನಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಎಲ್ಲ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ ಎಂದು ಹೇಳಿದರು
ಬೆಳಗಾವಿಯಲ್ಲಿ ಪಂಚಮಸಾಲಿ ವೋಟ್ ಪಾಲಿಟಿಕ್ಸ್ ವಿಚಾರವಾಗಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರಧಾರೆ ಮೇಲೆ ಚುನಾವಣಾ ಆಗುತ್ತದೆ. ಇದು ಜಾತಿ ಧರ್ಮದ ಮೇಲೆ ನಡೆಯುವ ಚುನಾವಣೆ ಅಲ್ಲ ಎಂದರು.

About The Author