
ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶೀಸಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿದ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಲಿಯಾಗಿ ಜನ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಚುನಾವಣೆ ಮುಗಿದ ನಂತರ ಎಲ್ಲಾ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುತ್ತದೆ. ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಈ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಲಿದೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ನಗರದ ಮೂರು ವಿಧಾನಸಭಾ ಕ್ಷೇತ್ರ ಸೇರಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಒಂದು ಲಕ್ಷ ಮತಗಳ ಅಂತರದ ಲೀಡ್ ಬರುತ್ತದೆ. ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಗದೀಶ್ ಶೆಟ್ಟರ್ ಗೆಲುವು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಮಾಡಿದ ರಮೇಶ್ ಜಾರಕಿಹೊಳಿ. ತಾವು ಗೆದ್ದ ನಂತರ ಹುಬ್ಬಳ್ಳಿ ಇಂದ ಬೆಳಗಾವರೆಗೆ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣಕ್ಕೆ ಒತ್ತು ನೀಡಬೇಕು. ಜಿಲ್ಲೆಯ ನೀರಾವರಿ ಯೋಜನೆ ಹಾಗೂ ವಿಮಾನ ನಿಲ್ದಾಣ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್, ಅನಿಲ್ ಬೆನಕೆ, ಮುಖಂಡರಾದ ಶಂಕರಗೌಡ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


