ನೂತನ ಶಿಶು ಪಾಲನ ಕೇಂದ್ರವನ್ನು ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಿ.ಕೆ.ಕೊಪ್ಪದ ಚಾಲನೆ ನೀಡಿದರು

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೂಡಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಶಿಶುಪಾಲ ಕೇಂದ್ರವನ್ನು ಮಕ್ಕಳಿಗೆ ಹಾಲನ್ನು ವಿತ್ತರಿಸುವ ಮೂಲಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಶ್ರೀಮತಿ ಸಿ.ಕೆ.ಕೊಪ್ಪದ ಅವರು ಚಾಲನೆ ನೀಡಿ ಮಾತನಾಡಿದರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಾರ್ಡ್ ಹೊಂದಿರುವ ಕುಟುಂಬಗಳ 7 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೆ ಶಿಶು ಪಾಲನಾ ಕೇಂದ್ರದಲ್ಲಿ ಸುರಕ್ಷತೆ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕ ಆಹಾರ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ನರೇಗಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಹಾಗೂ ನೆಮ್ಮದಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.


ಶಿಶು ಪಾಲನಾ ಕೇಂದ್ರದ ಮಕ್ಕಳ ನಿರ್ವಹಣೆಗೆ ಇಲಾಖೆಯ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವ ಕನಿಷ್ಠ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಇರುವ 10 ಮಹಿಳೆಯರನ್ನು ಗುರುತಿಸಿ, ಅದರಲ್ಲಿ 8 ಜನಕ್ಕೆ ತರಬೇತಿ ನೀಡಿದ್ದಾರೆ ಇಬ್ಬರನ್ನು ಕೇರ್ ಟೇಕರ್ಸ್‌ಗಳನ್ನಾಗಿ ರೊಟೇಶನ್ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಕೇರ್ ಟೇಕರ್ಸ್‌ಗಳಿಗೆ ನರೇಗಾ ಯೋಜನೆ ಅಡಿಯಲ್ಲಿ ಕನಿಷ್ಠ 100 ದಿನಗಳಿಗೆ ನಿಗದಿಪಡಿಸಿದ ಕೂಲಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ. ಶಿಶು ಪಾಲನಾ ಕೇಂದ್ರಗಳ ಕೇರ್ ಟೇಕರ್ಸ್‌ಗಳಿಗೆ ತರಬೇತಿ, ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

About The Author