12 August 2026
Advertisement
ರಾಜ್ಯ

ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು.

WhatsApp Group Join Now

ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು‌‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ.
40 ವರ್ಷದ ನಝೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಮೃತರು. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು.

ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ 6 ವರ್ಷದ ಮೋಹಿನ್ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು, ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ.
ನದಿಯಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author