ಕುಡಿಯುವ ನೀರಿಗಾಗಿ ಹಲ್ಲೆ 14 ಜನರ ಮೇಲೆ ಪ್ರಕರಣ ದಾಖಲು

WhatsApp Group Join Now

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ಬಳಕೆ ಮಾಡಿರುವ ಕುರಿತಂತೆ ಹಲ್ಲೆ, ಬೇದರಿಕೆಯ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರು ಮಾತಿಗೆ ಮಾತು ಬೆಳೆಸಿ ಗಲಾಟೆ ನಡೆದಿದೆ.
ಅಷ್ಟಕ್ಕೆ ಸುಮ್ಮನಾಗದ ಐಪಿಎಸ್ ಗಡಾದಿ ದೂರು ದಾರರ ಕುಟುಂಬದವರ ಮೇಲೆ ಹಲ್ಲೆ ಮಾಡಿ, ಜೀವ ಬೀದರಿಕೆ ಹಾಕಿದ ಹಿನ್ನೆಲೆಯಲ್ಲಿ ನೊಂದ ಕುಟುಂಬದವರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ತನಿಖೆ ಆರಂಭವಾಗಿದೆ ಎಂದು ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.

About The Author