12 August 2026
Advertisement
ರಾಜ್ಯ

ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

WhatsApp Group Join Now

ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ 2 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ ಮಂತ್ರಿ ಆಗಿದ್ರು, ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ, ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡ್ರೆ ಅವ್ರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು ಮಂಗಲಾ ಅಂಗಡಿಗೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ ಅಂತ, ಈ ಬಾರಿ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಯಿಂದ ನಿಲ್ಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚಂಚಲ ಮನಸಿನ ವ್ಯಕ್ತಿ, ಬದ್ದತೆ ಇಲ್ಲದ ಮನುಷ್ಯ. ಕಳೆದ ಬಾರಿ ಬಿಜೆಪಿಯವರು ಟಿಕೆಟ್ ಕೊಡದ್ದಕ್ಕೆ ಕಾಂಗ್ರೆಸ್ಗೆ ಬಂದ್ರು, ಕಾಂಗ್ರೆಸ್ ಟಿಕೆಟ್ ಕೊಟ್ರು ಶೆಟ್ಟರ್ ಕೆಟ್ಟಾಗಿ ಸೋತರು. ಇದೀಗ ಬೆಳಗಾವಿಯಲ್ಲಿ ಮಂಗಲಾ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂಗೆ ಪ್ರಧಾನಿ ಮೋದಿ ಮಾತಾಡಿದರೆ ಹಸಿ ಸುಳ್ಳು. ಶಿವಾಜಿ, ಕಿತ್ತೂರು ರಾಣಿ ಚೆನ್ನಮ್ಮ ಗೆ ಕಾಂಗ್ರೆಸ್ ಅವಮಾನಿಸಿದೆ ಎಂದು ಮೋದಿ ಸುಳ್ಳು ಹೇಳಿದ್ದಾರೆ. ಈ ಮಹನೀಯರನ್ನು ಅತ್ಯಂತ ಗೌರವಯುತವಾಗಿ ಕಾಂಗ್ರೆಸ್ ನೋಡಿಕೊಂಡಿದೆ. ಭಕ್ತರ ಅನುಕೂಲಕ್ಕೆ ಯಲ್ಲಮ್ಮನ ಪ್ರಾಧಿಕಾರ ಮಾಡುತ್ತೇವೆ ಎಂದರು.
10 ವರ್ಷಗಳಿಂದ ಮೋದಿ ಪ್ರಧಾನಿ ಆಗಿದ್ದರೂ ಜನ ಸಾಮಾನ್ಯರಿಗೆ ಏನು ಪ್ರಯೋಜನ ಆಗಿಲ್ಲ. ಅಗತ್ಯ ಬೆಲೆ, ಇಳಿಯಲಿಲ್ಲ. ಎಲ್ಲಿ ಹೋಯಿತು ಮೋದಿ ಹೇಳಿದ ಅಚ್ಛೆ ದಿನ್. 2014 ರಲ್ಲಿ ಡಿಸೇಲ್ 48, ಇವತ್ತು 95 ರೂಪಾಯಿ ಆಗಿದೆ. ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟು ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ, ಸುಳ್ಳೇ ಅವರ ಮನೆ ದೇವರು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದರು. ನಾವು ನುಡಿದಂತೆ ನಡೆದಿದ್ದೇವೆ. ಚುನಾವಣೆಗೂ ಮುನ್ನ ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದುವರೆಗು 200 ಕೋಟಿ ಮಹಿಳೆಯರು ಫ್ರೀ ಆಗಿ ಪ್ರಯಾಣ ಮಾಡಿದ್ದಾರೆ. ಈ ಹಿಂದಿನ ನಮ್ಮ ಸರ್ಕಾರ ಅನ್ನಭಾಗ್ಯ ಕಾರ್ಯಕ್ರಮದಡಿ 7 ಕೆಜಿ ನೀಡುತ್ತಿದ್ದೇವು, ಬಿಎಸ್ ಯಡಿಯೂರಪ್ಪ 5 ಕೆಜಿಗೆ ಇಳಿಸಿದ್ರು. 2023ರಲ್ಲಿ 10ಕೆಜಿ ಅಕ್ಕಿಯನ್ನು ಫ್ರೀ ಆಗಿ ಕೊಡ್ತೀವಿ ಅಂತ ಹೇಳಿದ್ವಿ. ನಾವು ದುಡ್ ಕೊಟ್ರು ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ..ಅಕ್ಕಿ ಬದಲಿಗೆ ತಿಂಗಳಿಗೆ 170 ರೂಪಾಯಿ ಕೊಡ್ತಾ ಇದ್ದೀವಿ, ಗೃಹ ಜ್ಯೋತಿ 200 ಯುನಿಟ್ ರವರೆಗೆ ಎಲ್ಲರಿಗೂ ಫ್ರೀ, ಗೃಹಲಕ್ಷ್ಮಿ ಯೋಜನೆ ಯಡಿ 1.20 ಕೋಟಿ ಮನೆಯ ಒಡತಿಯರಿಗೆ ತಿಂಗಳಿಗೆ 2000 ರೂಪಾಯಿ ನೀಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿದ್ದೇವೆ. ಬರ ಪರಿಹಾರ ನೀಡಲು ವಿಳಂಬ ಮಾಡಿದ ಕೇಂದ್ರ ಸರ್ಕಾರ 100 ರೂಪಾಯಿ ಕೇಳಿದ್ರೆ ಕೇವಲ 19 ರೂಪಾಯಿ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಲೋಕಸಭಾ ಚುನಾವಣಾ ನಂತರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಸಲ್ಲ. ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಮೀಸಲು ಇಡಲಾಗಿದೆ. ನಮ್ಮ ಖಜಾನೆ ಖಾಲಿ ಆಗಿಲ್ಲ, ಆಗೋದು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಬೆಳಗಾವಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದ್ದು, ಬೆಳಗಾವಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೆಲ್ಲವೂ ಕಾಂಗ್ರೆಸ್ ಕಾಲದಲ್ಲಿಯೇ ಆಗಿದ್ದು; ಬಿಜೆಪಿ ಬೆಳಗಾವಿಗೆ ಸದಾ ಅನ್ಯಾಯ ಮಾಡುತ್ತಲೇ ಬರುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಬೆಳಗಾವಿಯಲ್ಲಿ ಟಿಕೆಟ್ ನೀಡಿಕೆಯಲ್ಲೂ ಅನ್ಯಾಯ ಮಾಡಿದೆ. ಬೆಳಗಾವಿಯ ಸ್ವಾಭಿಮಾನ ಧಿಕ್ಕರಿಸಿ ಹುಬ್ಬಳ್ಳಿಯರಿಗೆ ಟಿಕೆಟ್ ನೀಡಿದೆ. ಬಿಜೆಪಿ ಅಭ್ಯರ್ಥಿಯಿಂದ ಬೆಳಗಾವಿಗೆ ಏನಾದರೂ ಒಳ್ಳೆಯದು ಆಗಿದೆಯೇ ಪ್ರಶ್ನಿಸಿದ ಸಚಿವರು, ಐಐಟಿ, ಐಟಿಬಿಟಿ ಕಂಪನಿಗಳನ್ನೆಲ್ಲ ಹುಬ್ಬಳ್ಳಿ-ಧಾರವಾಡಕ್ಕೆ ಕೊಂಡೊಯ್ದ ಜಗದೀಶ್ ಶೆಟ್ಟರ್ ಗೆ ಬೆಳಗಾವಿಯ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ 75 ವರ್ಷಗಳಿಂದ ಆಡಳಿತ ನಡೆಸುತ್ತಿದೆ ಎನ್ನುವುದನ್ನೇ ಬಿಜೆಪಿಯವರು ಮರೆತಿದ್ದಾರೆ. ಕೇವಲ 10 ವರ್ಷಗಳಿಂದ ಭಾರತ ಇದೆಯೆಂದು ಅವರು ಭ್ರಮೆಯಲ್ಲಿದ್ದಾರೆ. ಇಂದು ಭಾರತವನ್ನು ಎಲ್ಲರೂ ತಲೆಎತ್ತಿ ನೋಡುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎನ್ನುವುದನ್ನು ಬಿಜೆಪಿಯವರು ಎಂದೂ ಮರೆಯಬಾರದು; ಕೇವಲ 10 ವರ್ಷಗಳಲ್ಲಿ ಭಾರತ ವಿಶ್ವಮಾನ್ಯವಾಗಲು ಹೇಗೆ ಸಾಧ್ಯವಾಯಿತು? ಬಿಜೆಪಿಯವರು, ಪ್ರಧಾನಿ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ತಾವು ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಬೇಕಿತ್ತು; ಆದರೆ, ಅವರಲ್ಲಿ ಯಾವ ಸಾಧನೆಗಳೂ ಇಲ್ಲ; ಹೀಗಾಗಿ ಸಮಾಜದಲ್ಲಿ ಒಡಕು ಮೂಡಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರು ಹಲವು ಸುಳ್ಳುಗಳನ್ನೇ ಸತ್ಯವೆಂದು ಹೇಳುತ್ತಿದ್ದಾರೆ; ಜನರೇನು ದಡ್ಡರಲ್ಲ. ಚುನಾವಣೆ ಮೂಲಕ ಸರಿಯಾದ ತೀರ್ಪು ನೀಡಲಿದ್ದಾರೆ. ಕಾಂಗ್ರೆಸ ಪಕ್ಷ ಹಿಂದಿನಿಂದಲೂ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡು ರಾಷ್ಟ್ರ ಮತ್ತು ರಾಜ್ಯದ ಜನರ ಸೇವೆ ಮಾಡುತ್ತಾ ಬಂದಿದೆ; ಹಾಗಾಗಿ ಕಾಂಗ್ರೆಸ್ ಮೇಲೆ ಜನರು ವಿಶ್ವಾಸವನ್ನಿಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಸಚಿವರಾದ ಭೈರತಿ ಸುರೇಶ್, ಶಾಸಕರಾದ ಅಶೋಕ್ ಪಟ್ಟಣ್, ವಿಶ್ವಾಸ್ ವೈದ್ಯ, ರಾಜು ಸೇಠ್, ಮಹಾಂತೇಶ್ ಕೌಜಲಗಿ, ಬಾಬಾ ಸಾಹೇಬ್ ಪಾಟೀಲ್, ವಿನಯ್ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್ ವಕ್ತಾರೆ ತೇಜಸ್ವಿನಿ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ನಾವಲಗಟ್ಟಿ ಸೇರಿದಂತೆ ವಿವಿಧ ಘಟಕಗಳ, ಬ್ಲಾಕ್ ಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author