ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾವು

WhatsApp Group Join Now

ಕೋಲಾರ ತಾಲೂಕಿನ ವೇಮಗಲ್ ಸಮೀಪದ ನಾಗನಾಳ ಗ್ರಾಮದಲ್ಲಿ ಬುಧವಾರ ಸಂಜೆ 4:00 ಸಮಯದಲ್ಲಿ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಮುಳುಗಿ ಗೌತಮ್ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ರಾಘವೇಂದ್ರನಗರ ಬಡಾವಣೆ ನಿವಾಸಿ ಗೌತಮ್ ಗೌಡ (26) ಮೃತ ಯುವಕ. ತಮ್ಮ ತಂದೆಯ ಊರಾದ ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ತೆರಳಿದ್ದ ಅವರು, ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಗೌತಮ್ ನೀರಿನಲ್ಲಿ ಮುಳುಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿದೆ.

About The Author