12 August 2026
Advertisement
ರಾಜ್ಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿ ವೇಗವಾಗಿ ವಾಹನವನ್ನು ಚಲಾಯಿಸಿದರೆ ಬೀಳುತ್ತೆ ದಂಡ!

WhatsApp Group Join Now

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು/ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸದರಿ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿದ್ದು, ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು.

About The Author