ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಉಜ್ಜಿನಕೋಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು “ವಿಶ್ವ ಪರಿಸರ ದಿನಾಚರಣೆ” ಯನ್ನು ಆಚರಿಸಲಾಯಿತು. ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಲಾಯಿತು.

ಶಾಲಾ ಪ್ರಧಾನ ಗುರುಗಳಾದ ಶ್ರೀ ವಿಠ್ಠಲ್ ಹುಣಸಿಕಟ್ಟಿ ಮಾತನಾಡಿ, ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರಿಂದ ಪರಿಸರವನ್ನು ಉಳಿಸಲು ಸಾಧ್ಯ ಹೀಗಾಗಿ, ಪ್ರತಿಯೊಬ್ಬರು ಸಾಧ್ಯವಾದಷ್ಟು ಸಸಿಗಳನ್ನು ನೆಟ್ಟು ಆರೈಕೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಒಂದು ಕಾರ್ಯಕ್ರಮದಲ್ಲಿ ಪ್ರಧಾನ ಗುರುಗಳು, ಶಿಕ್ಷಕರು, ಶಿಕ್ಷಕಿಯರು, ಮತ್ತು ಮುದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು

About The Author