ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

WhatsApp Group Join Now

ರಾಮದುರ್ಗ ಪಟ್ಟಣದ ಶ್ರೀಮತಿ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಭಾಗ್ಯಶ್ರೀ ಮಸಲಿ, ಸಹಾಯಕ ವಲಯ ಅರಣ್ಯಾಧಿಕಾರಿ ಆರ್.ಎಸ್.ಹೊಸಮನಿ ಅವರು, ಅವರು ಗಿಡಗಳನ್ನ ನೆಡುವುದರ ಮೂಲಕ ಪರಿಸರವನ್ನ ಹೇಗೆ ಸಂರಕ್ಷಣೆ ಮಾಡಬಹುದು ಹಾಗೂ ಹಸಿರು ನಗರವನ್ನ ಹೇಗೆ ನಿರ್ಮಿಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಪ್ರಾಚಾರ್ಯ ಡಾ| ತ್ರಿಶಾಂತ್ ಕುಮಾರ್ ಅವರು, ಪರಿಸರ ಮತ್ತು ಭೂಮಿಯ ರಕ್ಷಣೆ ಮಾಡುವುದರೊಂದಿಗೆ ಪ್ಲಾಸ್ಟಿಕ್ ಮುಕ್ತ ವಲಯ ನಿರ್ಮಾಣದ ಕುರಿತು ತಿಳಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ಕೆ.ಎಂ. ಸಾರವಾನ್, ಎನ್.ಎಸ್.ಎಸ್ ಅಧಿಕಾರಿ ಪ್ರೊ| ಎ.ಸಿ.ಹುಲ್ಲೊಳ್ಳಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ| ಜೆ.ಪಿ.ವಾಳ್ವೇಕರ್, ಡಾ| ಮಹೇಶ ಪಾಟೀಲ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

About The Author