ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

WhatsApp Group Join Now

2023-24 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮತ್ಸ್ಯವಾಹಿನಿ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ ಇ-ಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳನ್ನು ಮಾರಾಟಕ್ಕಾಗಿ ಪರವಾನಿಗೆ ಮೂಲಕ ವಾಹನವನ್ನು ಪಡೆಯಲು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447416, 984367265, 9448907603 ಗೆ ಸಂಪರ್ಕಿಸಬಹುದು ಅಥವಾ ಇಲಾಖೆಯ ವೆಬ್‍ಸೈಟ್ https:fisherise. Karnataka.gov.in ಗೆ ಭೇಟಿ ನೀಡಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author