ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇವರಿಂದ ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

WhatsApp Group Join Now

ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ.

ಸಿರುಗುಪ್ಪ ಪಟ್ಟಣದ ದೇಶನೂರು ರಸ್ತೆ, ಆದೋನಿ ರಸ್ತೆ, ಬಳ್ಳಾರಿ ರಸ್ತೆ ಮತ್ತು ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆ, ಹೊಸಪೇಟೆ ರಸ್ತೆ ಹಾಗೂ ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್ ಲೈಲ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ, ಕಾರ್ಯಾಚರಣೆ ನಡೆಸಲಾಗಿದೆ.
ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಮುಖ್ಯವಾಹಿನಿ ತರಲು ಶಾಲೆಗಳಿಗೆ ಮರು ದಾಖಲಿಸಲಾಗಿದೆ.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಸಂಡೂರು ತಹಶೀಲ್ದಾರ ಅನೀಲ್ ಕುಮಾರ್, ಉಪತಹಶೀಲ್ದಾರ ಸಿದ್ದಾರ್ಥ, ಕಂದಾಯ ನಿರೀಕ್ಷಕ ಮಂಜುನಾಥ, ಆರೋಗ್ಯ ನಿರೀಕ್ಷಕ ರಂಗಸ್ವಾಮಿ, ಮುಖ್ಯ ಅಧಿಕಾರಿ ಜಯಣ್ಣ, ಕಾರ್ಮಿಕ ನಿರೀಕ್ಷಕ ಮಂಜುನಾಥ, ಚೈಲ್ಡ್ ಲೈನ್ ಸಿಬ್ಬಂದಿ ಚಂದ್ರಕಲಾ ಮತ್ತು ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಹೊನ್ನೂರಪ್ಪ ಸೇರಿದಂತೆ ಪೋಲಿಸ್ ಇಲಾಖೆ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು

About The Author