ರಾಮದುರ್ಗ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಂದು ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸ್ವಿಕೃತಿ ಪಡೆದುಕೊಳ್ಳಬೇಕು. ಅದನ್ನು ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು, ಪರಿಹಾರಕ್ಕೆ ಶ್ರಮಿಸಲು ಜಿಲ್ಲಾಡಳಿತ ಬದ್ಧವಿದೆ. ಜನಸ್ಪಂದನ ಕಾರ್ಯಕ್ರಮ ಅಷ್ಟೇ ಅಲ್ಲದೇ ಜಿಲ್ಲಾಡಳಿತ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಸದಾ ಬದ್ಧವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ 120ಕ್ಕೂ ಹೆಚ್ಚು ಜನರ ಉಚಿತ ಆರೋಗ್ಯ ತಪಾಸಣೆ ಮಾಡಿದರು.
ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಡಿ 10 ಕೌಂಟರ್ ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತೆರೆದಿದ್ದರೂ

ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲು :
ಪುರಸಭೆ ಸಮಸ್ಯೆ, ತಹಶೀಲ್ದಾರ್ ಕಚೇರಿಯಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪದ ಸಮಸ್ಯೆ, ನೀವೇಶನ ನೀಡುವ ಕುರಿತು, ರಸ್ತೆ, ಚರಂಡಿ, ಬೆಳೆವಿಮೆ, ಪಹಣಿ ಪತ್ರ ತಿದ್ದುಪಡಿ, ಪಿಂಚಣಿ, ಅಕ್ರಮ ಮರಳಿನ ಬಗ್ಗೆ, ಇಬ್ಬರು ಹೆಸರಿನಲ್ಲಿರುವ ಜಾಗೆ ಉತಾರ, ಸಹೋದರರ ಹೊಡೆದಾಟ ಸರಿಪರಿಸುವುದು, ಪಟ್ಟಣದ ಬೆಳಗಾವಿ ಮುಖ್ಯರಸ್ತೆ ಪಕ್ಕ ಇರುವ ಎಂ.ಎಸ್. ಆಯಿಲ್ ಸರಾಯಿ ಅಂಗಡಿಯಿಂದ ಪಕ್ಕದಲ್ಲಿ ಮುಸ್ಲೀಂ ಸಮಾಜದ ಖಬರಸ್ಥಾನ ಇರುವುದರಿಂದ ತೊಂದರೆಆಗುತ್ತಿದೆ ಎಂದು ಸಮಾಜ ಮುಖಂಡರು ಮನವಿ ಸಲ್ಲಿಸಿದರು. ಪ್ರವಾಹಕ್ಕೆ ತುತ್ತಾಗುವ ಚಿಕ್ಕತಡಸಿ, ಹಿರೇತಡಸಿ ಗ್ರಾಮಗಳ ಸ್ಥಳಾಂತರ ಒಳಗೊಂಡಂತೆ ವಿವಿಧ ಗ್ರಾಮಗಳ ಮುಖಂಡರು ತಮ್ಮ ಗ್ರಾಮದ ಸಮಸ್ಯೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ತಮ್ಮ ಅಹವಾಲು ಸಲ್ಲಿಸಿದರು. ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ನಿತೀಶ ಪಾಟೀಲ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, . ಜಿ.ಪಂ. ಸಿ.ಇ.ಓ. ರಾಹುಲ ಶಿಂಧೆ, ಉಪ-ವಿಭಾಗಾಧಿಕಾರಿಗಳು ಶ್ರೀಮತಿ. ಪ್ರಭಾವತಿ ಜಿ. ಫಕಿರಪೂರ
. ಬೈಲಹೊಂಗಲ ಉಪವಿಭಾಗ ಡಿವೈಎಸ್ಪಿ ರವಿ ನಾಯಕ ರಾಮದುರ್ಗ ಸಿಪಿಐ ಆಯ ಆರ ಪಟ್ಟಣಶೆಟ್ಟಿ ರಾಮದುರ್ಗ ತಹಶೀಲ್ದಾರ ಪ್ರಕಾಶ ಹೊಳೆಪಗೋಳು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಪ್ರವೀಣ್ ಕುಮಾರ್ ಸಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

About The Author