ಬಳ್ಳಾರಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನ ಸಮಪರ್ಕವಾಗಿ ಬಳಸಿಕೊಳ್ಳಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

WhatsApp Group Join Now

ಬಳ್ಳಾರಿ ಪಟ್ಟಣದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಜಿಲ್ಲೆಯ ಒಟ್ಟು ಎಸ್‍ಸಿಎಸ್‍ಪಿ ಅನುದಾನ ರೂ.3977.90 ಲಕ್ಷ ಅನುದಾನ ಬಿಡುಗಡೆಯಾಗಿದೆ. ಟಿಎಸ್‍ಪಿ ರೂ.5609.28 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಅನುದಾನವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಡಬೇಕು. ಯಾವುದೇ ರೀತಿಯಲ್ಲಿ ಹಣ ಪೋಲಾಗುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಅನುಷ್ಠಾನದ ಪರಿಣಾಮ ಮತ್ತು ಗುಣಮಟ್ಟದ ಬಗ್ಗೆ ಸಾಮಾಜಿಕ ಪರಿಶೋಧನೆ ಮತ್ತು ಮೌಲ್ಯಮಾಪನವನ್ನು ಸಹ ಮಾಡಿಸಲಾಗುತ್ತದೆ ಎಂದು ಅವರು ತಿಳಿಸಿದರು.


ಕೆಲ ಕಾಮಗಾರಿಗಳು ಹಾಗೂ ಪೂರ್ಣಗೊಳ್ಳದೇ ಇರುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ತಮಗೆ ನೀಡಿದ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಮತ್ತು ಆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ತಪ್ಪಿದಲ್ಲಿ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆಗಳ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಅನುದಾನ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About The Author