ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರ ವಶಕ್ಕೆ

WhatsApp Group
Join Now
ಸಿರುಗುಪ್ಪ, ತಾಲ್ಲೂಕಿನ ಗೋಸಬಾಳು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀನಿವಾಸ ನೇತೃತ್ವದ ತಂಡ ದಾಳಿ ನಡೆಸಿ 26100 ಮೌಲ್ಯದ 25 ಚೀಲದಲ್ಲಿ 9ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಗೋಸಬಾಳ ಗ್ರಾಮ ಈಶ್ವರ ಗುಡಿ ಹತ್ತಿರ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಹೋಳಗುಂದ ಗ್ರಾಮದ ಪಂಚಣ್ಣ ಇವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ ಇಲಾಖೆ ಸಿಬ್ಬಂದಿಗಳು ಹಾಗೂ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಇದ್ದರು . ಈ ಪ್ರಕರಣ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
