ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ವಿತರಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಶಾಸಕರ ಕ್ಷೇತ್ರದ ಮಾದರಿ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ಕನ್ನು ವಿತರಿಸಿ ಮಾತನಾಡಿದರು.
ಚುನಾವಣೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ಈಗ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಲಾಗುತ್ತಿದೆ


ಈಗ ಸಾಂಕೇತಿಕವಾಗಿ ವಿತರಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ತಾಲೂಕಿನ ಎಲ್ಲ ಪ್ರಾಥಮಿಕ, ಮಾಧ್ಯಮಿಕ ಹಾಗೂ ಕಾಲೇಜು ವಿದ್ಯಾರ್ಥಿ ಸೇರಿ 65 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಸುಮಾರು 4 ಲಕ್ಷ ನೋಟ್ ಬುಕ್ ವಿತರಿಸಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಪ್ರೌಢ ಶಾಲೆ, ಪ್ರಾಥಮಿಕ ಶಾಲೆಗಳನ್ನು ತೆರೆಯಲು ತಿರ್ಮಾಣಿಸಿದ್ದೇನೆ. ತಾಲೂಕಿನಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗೆ ಗುರುತಿಸಿ ಕ್ರೀಡಾಂಗಣ ನಿರ್ಮಿಸುವ ಭರವಸೆ ನೀಡಿದರು.
ಈ ಹೇಳಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ, ಶೈಕ್ಷಣಿಕ ಕ್ಷೇತ್ರ ಸುಧಾರಣೆಗೆ ಶಾಸಕ ಪಟ್ಟಣ ಅವರು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಸಾವಿರಾರು ಕೋಟಿ ಅನುದಾನ ಒದಗಿಸಿದ್ದಾರೆ. ಈಗ ಮತ್ತೆ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್ ನೀಡಿ ಮಕ್ಕಳ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹರ್ಲಾಪೂರ ಡವಳೇಶ್ವರ ಮಠದ ಶ್ರೀ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಉದಾರ ದೇಣಿಗೆ ನೀಡಿ ತಂದೆ ತಾಯಿಯ ಸಮಾಜ ಸೇವೆಯನ್ನು ಮುಂದು ವರೆಸಿದ ಶಾಸಕ ಅಶೋಕ ಪಟ್ಟಣ ಅವರಿಗೆ ಮುಂದಿನ ದಿನಗಳಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ಸಿಗಲಿ. ಈ ದಿಶೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಟ್ಟಣ ಅವರ ಹಿರಿತನವನ್ನು ಪರಿಗಣಿಸಿ ಸಚಿವರನ್ನಾಗಿ ನೇಮಿಸಲಿ ಎಂದು ಒತ್ತಾಯಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎಂ.ಎಸ್. ನಿಜಗುಲಿ
ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ, ಕಾಂಗ್ರೆಸ್ ಮುಖಂಡ ಪ್ರದೀಪ ಪಟ್ಟಣ, ರಾಯಪ್ಪ ಕತ್ತಿ, ಸೋಮಶೇಖರ ಸಿದ್ಲಿಂಗಪ್ಪನವರ, ರಮೇಶ ಅಣ್ಣಿಗೇರಿ ಪುರಸಭೆ ಸದಸ್ಯರು, ವಿವಿಧ ಶಾಲೆಯ ಶಿಕ್ಷಕ ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಭಾಗವಹಿಸಿದ್ದರು

About The Author