
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಸನ್ 2021-22 ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಅಡುಗೆ ಕೋಣೆ ಹಾಗೂ ಸನ್ 2020- 21 ನೇ ಸಾಲಿನ ವಿವೇಕರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇವರ ಕ್ಷೇತ್ರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಾಸಲಾದ ಗ್ರಂಥಾಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಒ ಪ್ರವೀಣ್ ಕುಮಾರ್ ಸಾಲಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಶ್ರೀನಿವಾಸ್ ವಿಶ್ವಕರ್ಮ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಪ್ಪ ಗುಡ್ದಣ್ಣವರ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸುನಂದಾ ರಾಜೇಂದ್ರ ದೊಡವಾಡ, ಸಂಗನಗೌಡ ಹಂದ್ರಾಳ, ಕ್ಷೇತ್ರ ಶಿಕ್ಷಣ ಅಧಿಕಾರಿ ಆರ್.ಟಿ.ಬಳಿಗಾರ, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಬಿ ಎಪ್.ಮುನವಳಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಲಲಿತಾ ಲಕ್ಷ್ಮಣ್ ಹೂಗಾರ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಾಮನಗೌಡ ಗೋ. ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಜಿ.ಬಿ. ರಂಗನಗೌಡರ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ಅಧಿಕಾರಿಗಳು ಊರಿನ ಗ್ರಾಮಸ್ಥರು ಶಾಲಾ ಶಿಕ್ಷಕರು ಶಾಲಾ ಮಕ್ಕಳು ಭಾಗವಹಿಸಿದ್ದರು


