
ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ತಾಲೂಕು ಸೇರಿದಂತೆ ಲೋಕಸಭಾ ಕ್ಷೇತ್ರದ ಮತದಾರರು ಶ್ರಮಿಸಿದ್ಧಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಇದ್ದರೂ ಜನತೆ 17 ಬಿಜೆಪಿ ಹಾಗೂ 2 ಜೆಡಿಎಸ್ ಸಂಸದರನ್ನು ಆಯ್ಕೆ ಮಾಡಿ 28 ರಲ್ಲಿ 19 ಕ್ಷೇತ್ರಗಳಿಂದ ಪಕ್ಷದ ಪರವಾದ ಸಂಸದರನ್ನು ಆಯ್ಕೆ ಮಾಡಿದ್ಧಾರೆ. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ರಾಜ್ಯ ಹಾಗೂ ವಿವಿಧ ದೇಶಗಳಲ್ಲಿ ಸಂಸ್ಥೆಗಳ ಅಂಗ ಸಂಸ್ಥೆಗಳನ್ನು ತೆರೆಯಲು ಶ್ರಮಿಸಿದ ಪ್ರಭಾಕರ ಕೋರೆ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ್ ಪಾಟೀಲ ಅವರನ್ನು ಸಹ ಕಾರ್ಯಕ್ರದಲ್ಲಿ ಸತ್ಕರಿಸಲಾಗುತ್ತಿದೆ. ತಾಲೂಕಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪತ್ರಿಕಾಗೋಷ್ಠಿಯ ಮುಖಾಂತರ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು ಮನವಿ ಮಾಡಿದರು.
ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ರಾಮದುರ್ಗ ಪಟ್ಟಣದಲ್ಲಿ ಬೀದಿ ದ್ವೀಪಗಳೇ ಇಲ್ಲದಂತಾಗಿದೆ. ಕ್ಷೇತ್ರದಲ್ಲಿ ಜನತೆಯ ಸಮಸ್ಯೆಗಳನ್ನು ಕೇಳುವವರು ಯಾರು ಇಲ್ಲದಂತಾಗಿದೆ. ಸಹೋದರ ಮಹಾದೇವಪ್ಪ ಯಾದವಾಡ ಅವರು ಕೋವಿಡ್ ಸಂದರ್ಭದಲ್ಲಿ ಜನತೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿದ್ದರು. ಆದರೆ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಅಧಿಕ ಪತ್ತೆಯಾಗುತ್ತಿವೆ. ಕ್ಷೇತ್ರದ ಶಾಸಕರು ಸ್ಥಳೀಯವಾಗಿ ಇದ್ದು, ಜನತೆಯ ಸಮಸ್ಯೆಗಳನ್ನು ಆಲಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಆಗ್ರಹಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ ಮಾತನಾಡಿ, ರಾಜ್ಯದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಬ್ರಷ್ಠಾಚಾರ, ದುರಾಡಳಿತ ತುಂಬಿ ತುಳುಕುತ್ತಿದೆ. ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿಗಳಿಗೆ ಜನತೆ ಹಣ ಸಂದಾಯ ಮಾಡಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ನಡೆಸಲು ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಉಪಾಧ್ಯಕ್ಷ ಮಾರುತಿ ಕೊಪ್ಪದ, ಬಿಜೆಪಿ ತಾಲೂಕಾ ಕಾರ್ಯದರ್ಶಿ ಉಮೇಶ ಹಕಾಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.


