12 August 2026
Advertisement
ರಾಜ್ಯ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬರ ಪರಿಹಾರ ನೀಡಲು ತಹಸೀಲ್ದಾರ್ ಇವರಿಗೆ ಮನವಿ.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷರು ಚೂನಪ್ಪ ಪೂಜೇರ ಇವರ ನೇತೃತ್ವದಲ್ಲಿ ರೈತರ ಖಾತೆಗೆ ಬರ ಪರಿಹಾರ ನೀಡಬೇಕೆಂದು ಪ್ರತಿಭಟನೆ ಮೂಲಕ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಜಗದೀಶ ದೇವರಡ್ಡಿ ಮಾತನಾಡಿ ರಾಮದುರ್ಗ ತಾಲೂಕನ್ನು
ಸಂಪೂರ್ಣ ಬರಗಾಲ ಪಿಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಕೂಡಾ ತಾಲೂಕಿನ ರೈತರಿಗೆ ಸಂಪೂರ್ಣ ಬರ ಪರಿಹಾರ ಬಂದಿರುವುದಿಲ್ಲ. ಎಲ್ಲ ರೈತರಿಗೆ ಶೀಘ್ರ ಪರಿಹಾರ ನೀಡಬೇಕೆಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಶಿವಾನಂದ ದೊಡವಾಡ, ಮಾರುತಿ ಕುಂಬಾರ, ಪತ್ರಪ್ಪ ಕೊಪ್ಪದ, ಹಾಗೂ ಇನ್ನೂ ಅನೇಕ ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

About The Author