
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಶಾಲೆಯ ಎರಡು ಸ್ಮಾರ್ಟ್ ಕ್ಲಾಸ್, ಎರಡು ಹೈಟೆಕ್ ನಲಿಕಲಿ ತರಗತಿ ಉದ್ಘಾಟನೆ, ಪಿಎಂಶ್ರೀ ಯೋಜನೆಯ ವಿವಿಧ ಚಟುವಟಿಕೆಗಳಿಗೆ ಚಾಲನೆ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮದೇ ಖರ್ಚಿನಿಂದ ಉಚಿತ ನೋಟಬುಕ್ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿ ಎಂಬ ಸದುದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ತಾಲೂಕಿನ ಕೀರ್ತಿ ತರಬೇಕು. ಕುನ್ನಾಳ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಾಲಕರ ವಸತಿ ನಿಲಯ, ಪ್ರೌಢ ಶಾಲೆ ಹಾಗೂ ಇನ್ನಿತರ ಎಲ್ಲ ಸೌಲಭ್ಯಗಳನ್ನು ಹಂತ ಹಂತವಾಗಿ ಕಾರ್ಯ ರೂಪಕ್ಕೆ ತರಲಾಗುವುದು ಎಂದರು.
ಪಿಎಂಶ್ರೀ ಯೋಜನೆಯ ನೋಡಲ್ ಶಿಕ್ಷಕ ಉಮೇಶ್ವರ ಮರಗಾಲ ಪ್ರಾಸ್ತಾವಿಕವಾಗಿ ಮಾತನಾಡಿ, ಕುನ್ನಾಳ ಶಾಲೆಯ ಅಭಿವೃದ್ಧಿ ಪಥದ ಸಮಗ್ರ ಮಾಹಿತಿಯನ್ನು ನೀಡಿ, ಮುಂಬರುವ ವರ್ಷಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದರು.
ಈ ವೇಳೆ ಬೆಂಗಳೂರಿನ ಪ್ರತಾಪ ಪರಾಶರ ನೇತೃತ್ವದ ಸುಂದರ ಭಾರತ ಟ್ರಸ್ಟ್ ಇವರು ರಾಮದುರ್ಗ ತಾಲೂಕಿನ ವಿವಿಧ ಶಾಲೆಗಳ ಗ್ರಂಥಾಲಯಗಳಿಗೆ ನೀಡಿರುವ ಪುಸ್ತಕ ಹಾಗೂ ವಿದ್ಯಾರ್ಥಿಗಳಿಗೆ ಶಬ್ದಕೋಶಗಳನ್ನು ಹಾಗೂ ಗ್ರಾಮದ ತುಂಗಾತಾಯಿ ಮಳಲಿ ಇವರು ೫ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಿದ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾಂಗ್ರೆಸ್ ಮುಖಂಡ ಸುರೇಶ ಪತ್ತೇಪೂರ, ಯುಥ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಹುಲಕುಂದ ಸಮೂಹ ಸಂಪನ್ಮೂಲ ವ್ಯಕ್ತಿ ಪಿ.ಎಂ. ಮಂಟೂರ, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ದಾನಿಗಳು, ಮುಖಂಡರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕ ಸಿಬ್ಬಂದಿ ಮತ್ತು ಮಕ್ಕಳು ಭಾಗವಹಿಸಿದ್ದರು


