
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ’ ಕಾರ್ಯಕ್ರಮಕ್ಕೆ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಚಂದ್ರಪ್ಪ ಚಾಲನೆ ನೀಡಿ ಅವರು ಮಾತನಾಡಿದರು.
ರಕ್ತದಾನಕ್ಕಿಂತ ಶ್ರೇಷ್ಟ ದಾನ ಮತ್ತೊಂದಿಲ್ಲ, ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ. ಒಬ್ಬ ವ್ಯಕ್ತಿ ಮಾಡಬಹುದಾಗಿದೆ ಎಂದು ಹೇಳಿದರು.
ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮಾತನಾಡಿ, ಇಂದಿನ ದಿನಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಶಸ್ತç ಚಿಕಿತ್ಸೆ, ಮಹಿಳೆ ಹಾಗೂ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವ ರೋಗಿಗಳಿಗೆ ಅವಶ್ಯಕವಾಗಿದೆ ಎಂದರು.
ವಿವಿಯ ಕುಲಸಚಿವರಾದ ರುದ್ರೇಶ್ ಎಸ್.ಎನ್ ಅವರು ಮಾತನಾಡಿ, ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ಸಮತೋಲನವಾಗಿರಲು ಸಹಾಯಕವಾಗುತ್ತದೆ ಎಂದರು.
ವಿವಿಯ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತವು ಮನುಷ್ಯರ ದೇಹದಲ್ಲಿ ಉತ್ಪತ್ತಿಯಾಗುವ ಸಂಪನ್ಮೂಲವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದಕ್ಕಾಗಿ ರಕ್ತದಾನ ಮಹಾದಾನ ಎಂದು ಕರೆಯುತ್ತೇವೆ ಎಂದರು.
ವಿವಿಯ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಸೇರಿದಂತೆ 150ಕ್ಕೂ ಹೆಚ್ಚು ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ. ರಮೇಶ್ ಓ ಓಲೇಕಾರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಬಸರೆಡ್ಡಿ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ.ಶಕೀಬ್, ವಿದ್ಯಾರ್ಥಿ ಕಲ್ಯಾಣ ಘಟಕದ ನಿರ್ದೇಶಕ ಡಾ.ಶಶಿಕಾಂತ ಮಜಗಿ, ರಾಷ್ಟ್ರೀಯ ಸೇವಾಯೋಜನೆಯ ಸಂಯೋಜಕ ಡಾ.ಕುಮಾರ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ, ವಿವಿಯ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಸೇರಿದಂತೆ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


