
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಭಾಗವಹಿಸಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು
ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು
.
“ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ಸೇವನೆಯು ನನಗೆ ಮತ್ತು ಮಾನವ ಸಮಾಜಕ್ಕೆ ಮಾರಕವೆಂದು ಇದರಿಂದ ಮಾನವನ ದೇಹವಲ್ಲದೇ ಮನಸ್ಸು ಮತ್ತು ಸ್ವಾಸ್ಥ್ಯ ಸಮಾಜ ಅನಾರೋಗ್ಯ ಪೀಡಿತವಾಗುತ್ತಿರುವುದು ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶದ ಯುವಜನತೆ ಇದರ ದಾಸ್ಯಕ್ಕೆ ಒಳಗಾಗುತ್ತಿರುವುದು ತಿಳಿದಿದೆ. ಇದರಿಂದ ಮಾನವನ ಆರ್ಥಿಕ, ಸಾಮಾಜಿಕ ಸ್ಥಿತಿ ಅಧೋಗತಿಗೆ ಇಳಿಯುತ್ತಿದೆ ಆದ್ದರಿಂದ ಪೂಜ್ಯ ಶ್ರೀ ಮ. ನಿ. ಪ್ರ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಗಳ ಜನ್ಮದಿನದ ಈ ಶುಭದಿನದಂದು ನಾನು ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳನ್ನು ತ್ಯಜಿಸುತ್ತೇನೆ
ಹಾಗೂ ಇನ್ನೆಂದಿಗೂ ಮುಟ್ಟುವುದಿಲ್ಲ ಹಾಗೂ ನನ್ನ ನೆರೆಹೊರೆಯವರಿಗೆ ಭಂದುಭಾಂದವರಿಗೆ ಸ್ನೇಹಿತರಿಗೆ ಈ ಬಗ್ಗೆ ತಿಳುವಳಿಕೆ ನೀಡುತ್ತೇನೆ ಎಂದು ಪ್ರಮಾಣ ಮಾಡಿದರು
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು


