
WhatsApp Group
Join Now
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಇರುವ ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ದಿನಾಂಕ: 06.08.2024 ರ ರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ ಸಂಭವಿಸಿದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ನಂದಿಸಲು ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿರುವ ಬಗ್ಗೆ ಹಾಗೂ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತಿದ್ದ ಟೇಪ್ ಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಲಾಯಿತು.
ಬೆಳಗಾವಿ ನಗರ ಪೋಲೀಸ್ ಆಯುಕ್ತರಾದ ಶ್ರೀ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ರಾಹುಲ್ ಶಿಂದೆ, ಡಿ ಹೆಚ್ ಓ, ಜೆ ಡಿ ಕೈಗಾರಿಕೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಈ ಸಮಯದಲ್ಲಿ ಉಪಸ್ಥಿತರಿದ್ದರು.


