
ದಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಹಿಸಿ, ಮಾತನಾಡಿದರು.
ಕೆಲವು ಇಲಾಖೆ ಅಧಿಕಾರಿಗಳು ಮಾರ್ಚವರೆಗೂ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡುತ್ತಾರೆ. ಇದು ಸರಿ ಅಲ್ಲ. ಪ್ರತಿ ಇಲಾಖೆಯಿಂದ ಜಿಲ್ಲಾ ಹಂತದಲ್ಲಿ ತಮ್ಮ ಇಲಾಖೆಯಿಂದ ಕೊಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳ ಪ್ರಯೋಜನ ಪಡೆದಿರುವವರ ವಿವರಗಳನ್ನು ದಾಖಲಿಸಿ, ನಿರ್ವಹಿಸಬೇಕು. ಇದರಿಂದ ಡುಪ್ಲಿಕೆಟ್ ಅಥವಾ ಯೋಜನೆಯ ಲಾಭ ಪಡೆದವರನ್ನು ನಿಯಂತ್ರಿಸಿ, ಹೊಸ ಫಲಾನುಭವಿಗಳಿಗೆ ಅವಕಾಶ ನೀಡಬಹುದು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರಿಗೆ ಸೀಗಬೇಕಾದ ಸೌಲಭ್ಯ ಮತ್ತು ಯೋಜನೆಗಳಲ್ಲಿ ಪ್ರಗತಿ ಸಾಧಿಸದಿರುವದಕ್ಕೆ ಫಲಾನುಭವಿಗಳು ಅರ್ಜಿ ಹಾಕದಿರುವುದು ಕಾರಣವಾಗಿದೆ. ಆದ್ದರಿಂದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಬರುವ 6 ಅಲ್ಪ ಸಂಖ್ಯಾತ ಸಮುದಾಯಗಳು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ವಿವಿಧ ಇಲಾಖೆಗಳ ಸಹಯೋಗ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ನಗರ ಹಾಗೂ ಗ್ರಾಮಗಳ ಮಟ್ಟದಲ್ಲಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಬೇಕೆಂದು ಅವರು ಹೇಳಿದರು.
2023-24 ನೇ ಸಾಲಿನ ನಾಲ್ಕನೇಯ ತ್ರೈಮಾಸಿಕ ಪ್ರಗತಿಯನ್ನು ಪರಿಶೀಲಿಸಲಾಗಿದೆ ಎಲ್ಲ ಇಲಾಖೆಗಳು ನಿಗಧಿತ ಗುರಿ ಸಾಧಿಸಿವೆ. 2024-25 ನೇ ಸಾಲಿಗೆ ನಿಗಧಿತ ಗುರಿಗೆ ಎಲ್ಲ ಇಲಾಖೆಗಳು ಕ್ರಿಯಾಯೋಜನೆ ರೂಪಿಸಿ, ಸಮರ್ಪಕವಾಗಿ ಅನುμÁ್ಠನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಸವಲತ್ತುಗಳನ್ನು ತಲುಪಿಸುವ ಕಡೆ ಅಧಿಕಾರಿಗಳು ಗಮನಹರಿಸಬೇಕು. ಪ್ರತಿಯೊಬ್ಬ ನಾಗರಿಕರಿಗೂ ಎಲ್ಲ ಯೋಜನೆಗಳು ಮಾಹಿತಿ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಈ ಒಂದು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ನಗರಾಭಿವೃದ್ದಿಕೋಶದ ಪ್ರಭಾರ ನಿರ್ದೇಶಕ ಅಜೀಜ್ ದೇಸಾಯಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಪ್ರಭುದೇವ್ ಎನ್.ಜಿ., ಡಿವೈಎಸ್‍ಪಿ ಎಸ.ಎಂ.ನಾಗರಾಜ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣಕುಮಾರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು


