ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ವಿಕಲಚೇತನರ ಇಲಾಖೆಯಿಂದ ಅರ್ಜಿ ಆಹ್ವಾನ

WhatsApp Group Join Now


ಆಗಸ್ಟ್ 14: ಭಾರತ ಸರ್ಕಾರವು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ಆಗಸ್ಟ್ 31, 2024 ರೊಳಗಾಗಿ ಮತ್ತು ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿದ್ಯಾರ್ಥಿಗಳು ಅಕ್ಟೋಬರ್ 31,2024 ರೊಳಗಾಗಿ ವೆಬ್‍ಸೈಟ್ (https://scholarships.gov.in/) ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಹಾಗೂ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


About The Author