ಎಲ್ಲಾ ರಾಜ್ಯಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ರ್ಯಾಗ್ ಹೊಂದಿದಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

WhatsApp Group Join Now

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ
ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ
ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದು

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ರ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು
ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದೆ
.

About The Author