ಡಿ. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರ; ಜಿಲ್ಲಾಧಿಕಾರಿ ದಿವ್ಯ ಪ್ರಭು

WhatsApp Group Join Now

ದಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ದೇವರಾಜು ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ದೇವರಾಜು ಅರಸು ಅವರು ಕ್ರಾಂತಿಕಾರಿ ಹೋರಾಟಗಾರರಾಗಿದ್ದರು. ನಾವು ಮಾಡುತ್ತಿರುವಂತ ಕಾಯಕದ ಬಗ್ಗೆ ಕೀಳರಿಮೆ ಪಡಬಾರದು. ದೇವರಾಜು ಅರಸರ ಪ್ರತಿಯೊಂದು ತತ್ವ, ಆದರ್ಶಗಳನ್ನು ಪಾಲಿಸೋಣ, ಅವರ ಕೆಲವೊಂದು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಡಿ.ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಶಶಿಧರ ತೋಡಕರ ಅವರು ಮಾತನಾಡಿ, ಸಾಮಾಜಿಕ ಬದಲಾವಣೆ, ಬಡತನ ನಿರ್ಮೂಲನೆ, ಮನೆಗಳ ನಿರ್ಮಾಣದಲ್ಲಿ ಅದ್ವಿತೀಯ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿಧ್ಯಾಭ್ಯಾಸ ಮಾಡುವಂತಹ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು. 70-80 ರ ದಶಕದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾದ ನ್ಯಾಯ ಪ್ರತಿಕನೆಂಬ ಖ್ಯಾತಿಗೂ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ ಎಸ್ ಅವರು ಡಿ.ದೇವರಾಜು ಅರಸು ಅವರ ಶೈಕ್ಷಣಿಕ ಜೀವನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿದರು.

ಕಾರ್ಯಕ್ರಮದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಶಾಲ್, ನಾಮ ನಿರ್ದೇಶಿತ ಸದಸ್ಯ ಗುರುನಾಥ ಹುಲಗಾರ, ಅಲೆಮಾರಿ ಸಮುದಾಯದ ಮುಖಂಡ ರಾಜು ವೇಲಕರ, ಈಶ್ವರ ಬೆಳ್ಳಿಗಟ್ಟಿ ಇದ್ದರು. ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಗೋಪಾಲ ಲಮಾಣಿ ಅವರು ಅಥಿತಿಗಳ ಪರಿಚಯ ಮಾಡಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಗೀತಾ ಹೂಗಾರ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ವಸತಿ ನೀಲಯದ ನಿಲಯ ಪಾಲಕರು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author