
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿಯನ್ನು ವಿರೋಧಿಸಿ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಾರ್ವಜನಿಕರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.

ಶಾಸಕರ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ರಾಮದುರ್ಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂರು.
ಪ್ರತಿಭಟನಾಕಾರನ್ನು ಉದ್ದೇಶಿಸಿ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿಯನ್ನು ಹಿಂತೆಗೆದುಕೊಳ್ಳುವAತೆ ನಿರ್ದೇಶಿಸಲು ತಕ್ಷಣ ರಾಷ್ಟçಪತಿಗಳು ಮಧ್ಯಸ್ಥಿಕೆ ವಹಿಸಬೇಕು. ಕರ್ನಾಟಕದ ರಾಜ್ಯಪಾಲರು ಸಂವಿಧಾನ ಬಾಹಿರವಾದ ಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸ್ವಾತಂತ್ರ‍್ಯ ದಿನಾಚರಣೆಯ ಮರುದಿನ ಕೈಗೊಂಡಿರುವ ಈ ಕ್ರಮವು ಕೇವಲ ಕರ್ನಾಟಕದ ಚುನಾಯಿತ ಸರ್ಕಾರದ ಮೇಲೆ ನೇರ ದಾಳಿಯಾಗಿರದೆ, ಕರ್ನಾಟಕದ ಜನತೆಯ ಜನಾದೇಶ ಪಡೆದಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಲೆಕ್ಕಾಚಾರದ ಷಡ್ಯಂತ್ರವಾಗಿದೆ. ರಾಜಕೀಯ ದ್ವೇಷ ಮತ್ತು ರಾಜ್ಯಪಾಲರ ಕಚೇರಿಯ ದುರುಪಯೋಗ ಬಿಜೆಪಿ ಮಾಡಿದೆ ಎಂದು ಆರೋಪಿಸಿದರು.
ರಾಜ್ಯಪಾಲರ ನಿರ್ಧಾರವು ಕೇಂದ್ರ ಸರ್ಕಾರದ ರಾಜಕೀಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂಬುದು ಸ್ಪಷ್ಟವಾಗಿದೆ. ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸೇರಿದಂತೆ ಅದರ ಮಿತ್ರಪಕ್ಷಗಳು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿ ಕೊಂಡಿದ್ದಾರೆ. ಜನರ ಕಲ್ಯಾಣಕ್ಕಾಗಿ ಸತತವಾಗಿ ಶ್ರಮಿಸಿದ ಸರ್ಕಾರವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಇವರ ಆಟ ಯಾವುದು ನಡೆಯಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ. ರಂಗನಗೌಡ್ರ, ನಗರಾಧ್ಯಕ್ಷ ಸೋಮಶೇಖರ ಶಿದ್ಲಿಂಗಪ್ಪನವರ, ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಹೂರ ಹಾಜಿ, ಕೆಎಂಎಫ್ ನಿದೇರ್ಶಕ ರಮೇಶ ಅಣ್ಣಿಗೇರಿ, ಮಹಿಳಾಧ್ಯಕ್ಷೆ ರಾಜೇಶ್ವರಿ ಮೆಟಗುಡ್ಡ, ಮುಖಂಡರಾದ ರಾಮಣ್ಣ ಬಿಡಕಿ, ಆರ್.ಎಚ್. ತೋಳಗಟ್ಟಿ, ಪ್ರದೀಪ ಪಟ್ಟಣ, ರಾಜು ಮಾನೆ ಸೇರಿದಂತೆ ತಾಲೂಕಾ ಕಾಂಗ್ರೆಸ್ ಸಮಿತಿಯ ಎಲ್ಲ ಪದಾಧಿಕಾರಿಗಳು ಮತ್ತು ಪುರಸಭೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.


