ವಕ್ಪ್ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಿ: ಸಚಿವ ಜಮೀರ ಅಹ್ಮದ

WhatsApp Group Join Now

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಪ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಧಾರವಾಡ ಜಿಲ್ಲೆಯಲ್ಲಿ 2453 ವಕ್ಫ ಆಸ್ತಿಗಳಿದ್ದು ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಪ ಆಸ್ತಿಗಳ ಸಮೀಕ್ಷೆ, ರಕ್ಷಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಧಾರವಾಡ ಜಿಲ್ಲೆಯಲ್ಲಿ 604 ವಕ್ಪ ಸಂಸ್ಥೆಗಳಿಗೆ. 2453 ವಕ್ಪ ಆಸ್ತಿಗಳಿವೆ. ವಕ್ಪ ಸಂಬಂಧಿಸಿದಂತೆ ಯಾವ ಆಸ್ತಿಯು ಒತ್ತುವರಿ ಆಗಿರುವ ವರದಿ ಇಲ್ಲ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಧಿಕಾರಿಗಳು ಮುಕ್ತಾಯಗೊಳಿಸಬೇಕೆಂದು ವಸತಿ, ವಕ್ಪ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ ಅಹ್ಮದ ಅವರು ಹೇಳಿದರು.
ವಸತಿ ಯೋಜನೆಯಡಿ ಸ್ಲಂಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆದಿದ್ದು, ಅವಳಿನಗರದಲ್ಲಿ ಬಾಕಿ ಇರುವ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಉತ್ತರ-ಕನ್ನಡ ಜಿಲ್ಲೆಯಲ್ಲಿ ವಕ್ಪ ಆಸ್ತಿ ಹಾಗೂ ಕಬರಸ್ತಾನಗಳಿಗೆ ಭೂಮಿ ಸಮಸ್ಯೆ ಇದ್ದು, ಈ ಕುರಿತು ಕಂದಾಯ ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ಜರುಗಿಸಿ, ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ, ಶಾಸಕರಾದ ಎನ್.ಎಚ್.ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಉತ್ತರ-ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕೆ. ಸೇರಿಂತೆ ವಕ್ಪ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯ ಮಟ್ಟದ ಅಧಿಕಾರಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು

About The Author