
ದಾರವಾಡ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ವಹಿಸಿ, ಮಾತನಾಡಿದರು.
ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅಕ್ಟೋಬರ 12 ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು. ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ನಮ್ಮ ಜಿಲ್ಲೆಯ ಸಂಸ್ಕøತಿಯನ್ನು ಹೆಚ್ಚು ಜನರಿಗೆ ಪರಿಚಯಿಸಲು ಸಾಧ್ಯವಾಗುತ್ತದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ನಾಡಹಬ್ಬವಾಗಿ ಸರ್ಕಾರದವತಿಯಿಂದ ಪ್ರತಿ ವರ್ಷವೂ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಪ್ರಸಕ್ತ ವರ್ಷ ಮೈಸೂರು ದಸರಾ ಮಹೋತ್ಸವ ಅಕ್ಟೊಬರ 3 ರಿಂದ ಪ್ರಾರಂಭವಾಗಿ ಅಕ್ಟೋಬರ್ 12 ರವರೆಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ನಾವು ಭಾಗವಹಿಸಿ ನಮ್ಮ ಇತಿಹಾಸ, ಪರಂಪರೆ,ಕಲೆ, ಸಂಗೀತ, ಸಾಹಿತ್ಯ ಹಾಗೂ ಅಭಿವೃದ್ಧಿಯ ಅಂಶಗಳನ್ನು ಬಿಂಬಿಸುವ ಸ್ಥಬ್ದಚಿತ್ರವನ್ನು ಪ್ರದರ್ಶಿಸಲಾಗುವುದು. ಈ ಕುರಿತು ಈಗಿನಿಂದಲೇ ಸಿದ್ದತೆ ಆರಂಭಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಧಾರವಾಡ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ರಂಗಭೂಮಿಯ ಸಾಧನೆ ಜೊತೆಗೆ ಶೈಕ್ಷಣಿಕ ಸಾಧನೆಯಲ್ಕಿ ಅಮೋಘ ಸಾಧನೆ ಮಾಡಿದೆ. ಇಲ್ಲಿನ ಕೃಷಿ, ಕಾನೂನು,ಕರ್ನಾಟಕ ವಿಶ್ವವಿದ್ಯಾಲಯ, ಐಐಟಿ,
ಐಐಐಟಿಗಳು ಜಿಲ್ಲೆಯ ಹೆಮ್ಮೆ ಸಂಕೇತಯಾಗಿವೆ. ಈ ಎಲ್ಲ ವಿಶ್ವವಿದ್ಯಾಲಯಗಳ ಸಂಶೋಧನೆ ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿವೆ. ಈ ಸಂಶೋಧನೆ, ಸಾಧನೆಗಳು ನಮ್ಮ ಜಿಲ್ಲೆಯ ಹೆಮ್ಮೆಯ ವಿಷಯಗಳಾಗಿದ್ದು, ಅವುಗಳನ್ನು ಜನಸಾಮಾನ್ಯರಿಗೂ ಪರಿಚಯಿಸುವ ನಿಟ್ಟಿನಲ್ಲಿ ಸ್ಥಬ್ದಚಿತ್ರವನ್ನು ರೂಪಿಸಬೇಕು ಎಂದು ಸಿಇಓ ಸ್ವರೂಪ ಅವರು ಹೇಳಿದರು.
ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರವು ಮೈಸೂರಿನ ದೊಡ್ಡಕೆರೆ ಮೈದಾನದ ಆವರಣದಲ್ಲಿ ಅಕ್ಟೋಬರ 3 ರಿಂದ ಡಿಸೆಂಬರ 31 ರವರೆಗೆ ಸುಮಾರು 90 ದಿನಗಳ ಆಯೋಜಿಸಲು ನಿರ್ಧರಿಸಿದೆ. ಈ ವಸ್ತುಪ್ರದರ್ಶನವು ನಾಡಿನ ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಇತಿಹಾಸ ಮತ್ತು ಭವ್ಯ ಪರಂಪರೆಯನ್ನು ಪ್ರತಿಬಿಂಬಿಸುವ ಸಾಂಸ್ಕøತಿಕ ವೇದಿಕೆಯಾಗಿ ರೂಪಗೊಳ್ಳುತ್ತದೆ.
ಧಾರವಾಡ ಜಿಲ್ಲೆಯನ್ನು ಸಮರ್ಥವಾಗಿ ಮತ್ತು ಸಮರ್ಪಕವಾಗಿ ಪ್ರತಿನಿಧಿಸುವಂತೆ ವಸ್ತುಪ್ರದರ್ಶನದಲ್ಲಿ ಮಳಿಗೆಯನ್ನು ಸ್ಥಾಪಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಮತ್ತು ತಮ್ಮ ಇಲಾಖೆಯ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸಲು ಈ ಅವಕಾಶವನ್ನು ಅಧಿಕಾರಿಗಳು ಬಳಸಿಕೊಳ್ಳಬೇಕೆಂದು ಅವರು ಹೇಳಿದರು.
ಸಭೆಯಲ್ಲಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕ್ಕನೂರ. ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ ಕುರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡಿದ್ದರು


