ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವ ಗಾರ್ಡ್‌ನ್‌ನಲ್ಲಿ ಗುರುವಾರ ಜರುಗಿದ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ, ಹಾಗೂ ರಾಮದುರ್ಗ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು
ಸರಕಾರದ ಮುಖ್ಯ ಸಚೇತಕ, ಹಾಗೂ ಶಾಸಕರಾದ ಅಶೋಕ ಪಟ್ಟಣ ಅವರು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಪ್ರಗತಿ ಸಾಧ್ಯವಿದೆ. ಶಿಕ್ಷಕರು ಶಾಲೆಯಲ್ಲಿರುವ ಮಕ್ಕಳನ್ನು ತಮ್ಮ ಮನೆಯ ಮಕ್ಕಳಂತೆ ಪ್ರೀತಿಯಿಂದ ಬೋಧನೆ ಮಾಡಿ, ಕಾಳಜಿ ವಹಿಸಬೇಕು. ಅಂದಾಗ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಪ್ರಾಸ್ತಾವಿಕ ಮಾತನಾಡಿದರು.
ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ ಸಾಲಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಜೆ.ಸಿ. ಶೀಲವಂತಮಠ, ಬಿ.ಎಫ್, ಮುನವಳ್ಳಿ, ತಾಲೂಕು ಮಟ್ಟದ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.

About The Author