
WhatsApp Group
Join Now
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು.
ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿ ಸಿಬ್ಬಂದಿ ಇದ್ದರು.


