ಬೆಟಗೇರಿ ಪಿಕೆಪಿಎಸ್‌ಗೆ ೧೫.೦೬ಲಕ್ಷ ರೂಪಾಯಿ ಲಾಭ

WhatsApp Group Join Now

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್೨೦೨೩-೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.೨೩ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.
ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್೨೦೨೩-೨೪ನೇ ಸಾಲಿನಲ್ಲಿ ಸಂಘವು ಒಟ್ಟು ೧೫.೦೬.೭೭೯ ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ೫ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಶೇರ ಸದಸ್ಯರು, ಗ್ರಾಹಕರು, ನಾಗರಿಕರ ಜೊತೆ ಆಡಳಿತ ಮಂಡಳಿ ಸದಸ್ಯರು ಸಂಘದ ಸಮಗ್ರ ಪ್ರಗತಿ, ಸಂಘದಿಂದ ದೊರಕುವ ವಿವಿಧ ಸಾಲ, ಸೌಲಭ್ಯಗಳ ಕುರಿತು ಚರ್ಚಿಸಿದರು. ಈ ವೇಳೆ ಸಂಘದ ಆಡಳಿತ ಮಂಡಳಿ ಸದಸ್ಯರು, ಶೇರ ಸದಸ್ಯರು, ಗ್ರಾಹಕರು, ಸಂಘದ ಸಿಬ್ಬಂದಿ ವರ್ಗ, ಇತರರು ಇದ್ದರು.

About The Author