12 August 2026
Advertisement
ರಾಜ್ಯ

87ನೇ ಅಖಿಲ ಭಾರತ ಕನ್ನಡ ಸಮ್ಮೇಳನದ ಕನ್ನಡದ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಸ್ವಾಗತಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡ
ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ ಸ್ವಾಗತಿಸಿ
ಪೂಜಾ ಕಾರ್ಯಕ್ರಮ ನೆರವೇರಿಸಿ ಮುಖ್ಯ ರಸ್ತೆಯ ಮೂಲಕವಾಗಿ ಕುಂಭ ಮೇಳ ಮೆರವಣಿಗೆಯೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿ ಬಿಳ್ಕೊಟ್ಟರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ್ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌ ಟಿ ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಐ ಕೆ ಗುಡದಾರಿ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಶಂಕರ್ ಕುಂಬಾರ್, ಸಿಬ್ಬಂದಿ ವರ್ಗದವರು, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಹಾಗೂ ರಾಮದುರ್ಗ ತಾಲೂಕಿನ ವಿವಿಧ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

About The Author