ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹೃದಯಾಘಾತ ತಡೆಯಲು ಉಚಿತ ಇಂಜೆಕ್ಷನ್ ಪಡೆದುಕೊಳ್ಳಿ : ಡಾ. ನವೀನ್ ನಿಜಗುಲಿ

WhatsApp Group Join Now


ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದ್ದು, ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ 32 ಸಾವಿರ ರೂಪಾಯಿ ಬೆಲೆ ಬಾಳುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ತಾಲೂಕ ಸಾರ್ವಜನಿಕ ಆಸ್ಪತ್ರೆ ರಾಮದುರ್ಗದಲ್ಲಿ ಉಚಿತವಾಗಿ ಪಡೆಯಬಹುದಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ತಾಲೂಕಾ ವೈದ್ಯಾಧಿಕಾರಿಗಳು ಡಾ. ನವೀನ್ ನಿಜಗುಲಿ ಮನವಿ ಮಾಡಿದರು.

About The Author