12 August 2026
Advertisement
ರಾಜ್ಯ

ಬಸಿಡೋನಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಗೊರಬಾಳ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸಿಡೋನಿ ಗ್ರಾಮದಲ್ಲಿ ರಸ್ತೆ ತುಂಬ ಗುಂಡಿಮಯ ಯಾಮಾರಿದರೆ ಯಮಲೋಕ ದರ್ಶನ ಗ್ಯಾರಂಟಿ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಯಲ್ಲಿನ ಗುಂಡಿಗಳು ಸುಗಮ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿವೆ.
ರಸ್ತೆ ಅಭಿವೃದ್ಧಿ ಕಂಡು ಸುಮಾರು ವರ್ಷಗಳೇ ಕಳೆದಿದೆ. ಇದುವರೆಗೂ ರಸ್ತೆ ಅಭಿವೃದ್ಧಿ ಕಂಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಬಾರಿ ತೊಂದರೆಯಾಗಿದೆ. ಹಲವಾರು ಬಾರಿ ಸ್ಥಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದಷ್ಟು ಬೇಗ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ರಸ್ತೆ ಹದಗೆಟ್ಟಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ನಾಗರಿಕರು ಹಾಗೂ ವಾಹನ ಸವಾರರು ಬಾರಿ ತೊಂದರೆ ಅನುಭವಿಸುತ್ತಿದ್ದಾರೆ. ಸ್ವಲ್ಪ ಯಾಮಾರಿದರೆ ಯಮಲೋಕನ ದರ್ಶನ ಗ್ಯಾರಂಟಿ.ಅಲ್ಲದೆ, ಎಷ್ಟೋ ಬಾರಿ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವ ವೇಳೆ ಆಯ ತಪ್ಪಿ ಬಿದ್ದು, ಘಟನೆಯೂ ಸಹ ನಡೆದಿದೆ. ರಸ್ತೆಯಲ್ಲಿ ಸಂಚರಿಸುವ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆಯನ್ನು ಅಭಿವೃದ್ಧಿ ಮಾಡಿಸಿಕೊಡು ವಂತೆ ಸ್ಥಳಿಯ ಗ್ರಾಮ ಪಂಚಾಯಿತಿಗೆ ಸಾಕಷ್ಟು ಬಾರಿ ಗ್ರಾಮಸ್ಥರು ಮನವಿ ಮಾಡಿದರು ಕೂಡ ಅಭಿವೃದ್ಧಿ ಕೆಲಸ ಮಾತ್ರ ಮಾಡಿಸಿಲ್ಲ ಎಂದು ಸಮಾಜ ಸೇವಕರಾದ ಎಸ್ ಬಿ ಪವಾಡೆಪ್ಪನವರ್, ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

About The Author