ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಪುಂಡರಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

WhatsApp Group Join Now

ರಾಮದುರ್ಗ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಆಚರಿಸುವ ಬಗ್ಗೆ ಸಿದ್ಧತೆ ನಡೆಸುತ್ತಿರುವ ಕುರಿತು ಸುಳಿವು ದೊರೆಯುತ್ತಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅವಕಾಶ ನೀಡಬಾರದು ಎಂದು ಪ್ರತಿಭಟಿಸಿ ಕರ್ನಾಟಕ ರಕ್ಷಾಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ತಹಶೀಲ್ದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ತಾಲೂಕಾಅಧ್ಯಕ್ಷ ವಿಜಯಕುಮಾರ ರಾಠೋಡ ಮಾತನಾಡಿದ ಅವರು ನಾಡದ್ರೋಹಿ ಎಂಇಎಸ್ ಹಲವು ದಿನಗಳಿಂದ ನಾಡಿನ ನ. ೧ ರ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕರಾಳ ದಿನಾಚಣೆಗಳನ್ನು ಈ ಹಿಂದೆ ಆಚರಣೆ ಮಾಡಿ, ನಾಡದ್ರೋಹ ಮೆರೆದಿದ್ದಾರೆ. ಆದರೆ ಈ ಬಾರಿ ಅದಕ್ಕೆ ಪೊಲೀಸ್ ಇಲಾಖೆಯ ಯಾವುದೇ ಕಾರಣಕ್ಕೂ ಅವಕಾಶ ನೀಡದಂತೆ ಪುಂಢರ ಮೇಲೆ ನಿಘಾ ವಹಿಸಬೇಕು. ಒಂದು ವೇಳೆ ಅವಕಾಶ ನೀಡಿದಲ್ಲಿ ಕರ್ನಾಟಕ ರಕ್ಷಾಣಾ ವೇದಿಕೆ ನೇತೃತ್ವದಲ್ಲಿ ಉಗ್ರವಾದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ನಾಡು-ನುಡಿ, ನೆಲ-ಜಲ ರಕ್ಷಣೆಗೆ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ನಾಡಿನಲ್ಲಿದ್ದುಕೊಂಡು ಹೊರರಾಜ್ಯದ ಪುಂಡÀರು, ನಮ್ಮ ಅನ್ನವನ್ನು ತಿಂದು ನಮಗೇ ದ್ರೋಹ ಬಗೆಯುತ್ತಿರುವುದು ವಿಷಾಧನೀಯ. ಅಂತಹ ಘಟನೆಗಳಿಂದ ಕನ್ನಡ ಮನಸ್ಸುಗಳಿಗೆ ನೋವುಂಟಾಗುತ್ತದೆ. ಕೂಡಲೇ ದ್ರೋಹಿಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಂಡು ಅಂತಹ ಕಿಡಗೇಡಿಗಳನ್ನು ಗಡಿಪಾರು ಮಾಡಬೇಕು. ವಿಜ್ರಂಭನೆಯ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಹಕಾರ ನೀಡಬೇಕು ಎಂದು ಅವರು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಹೂರ ಹಾಜಿ, ಮುಖಂಡರಾದ ಕೃಷ್ಣಾ ಬಡಿಗೇರ, ಆನಂದ ಜಾಧವ, ಹನಮಂತ ಕುಲಗೋಡ, ಆರ್.ಎ. ಮೆಟಗುಡ್ಡ, ಕರವೇ ಸೇನಾನಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

About The Author