
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿನ ಬಸವಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಶ್ರೀ ಧನಲಕ್ಷಿö್ಮÃ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಾದ್ಯಂತ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ಸಾಮಾನ್ಯ ಜನರ ಬಾಳಲ್ಲಿ ಬೆಳಕು ಮೂಡಿಸಿದ ಕೀರ್ತಿಪೂಜ್ಯ ವಿರೇಂದ್ರ ಹೆಗ್ಗಡೆ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಧರ್ಮಸ್ಥಳ ಸಂಸ್ಥೆಯ ಗೋಕಾಕ ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ್ ಅವರು ಶ್ರೀ ಕ್ಷೇತ್ರದ ಹಿನ್ನೆಲೆ, ಯೋಜನೆಯು ಬಿ.ಸಿ, ಟ್ರಸ್ಟ್ ವ್ಯವಸ್ಥೆಯಲ್ಲಿ ಸದಸ್ಯರಿಗೆ ತಲುಪಿಸುವ ಹಣಕಾಸಿನ ವ್ಯವಹಾರ ಮತ್ತು ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೋಕಾಕ್‌ನ ಬ್ಯಾಂಕ್ ಆಫ್ ಮಹಾರಾಷ್ಟç ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕಿ ರಶ್ಮಿ ವಿ. ಅವರು, ಯೋಜನೆಯು ಧರ್ಮಸ್ಥಳ ಸಂಸ್ಥೆ ಮೂಲಕ ಸಂಘಗಳಿಗೆ ನೀಡುತ್ತಿರುವ ಸಾಲ ಸೌಲಭ್ಯ ಮತ್ತು ಅದಕ್ಕೆ ಅನ್ವಯವಾಗುವ ನಿಯಮ, ಬಡ್ಡಿದರ ಹಾಗೂ ಸ್ವ. ಸಹಾಯ ಸಂಘಗಳು ನಿಯಮಾವಳಿಗಳ ಬಗೆಗೆ ಸಮಗ್ರ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಜನ ಜಾಗೃತಿ ವೇದಿಕೆ ನಿಕಟ ಪೂರ್ವ ಅದ್ಯಕ್ಷ ಅಶೋಕ ಕುಲಗೋಡ, ಸದಸ್ಯರಾದ ಜಿ.ಬಿ. ರಂಗನಗೌಡ್ರ, ರಮೇಶ್ ಜಲಗೇರಿ, ದಯಾನಂದ ಶಿರೂರು, ಧಾರವಾಡ ಪ್ರಾದೇಶಿಕ ವಿಭಾಗದ ಬಿ.ಸಿ. ಯೋಜನಾಧಿಕಾರಿ ಶ್ರೀಕಾಂತ, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿ ಸಿದ್ದಾರೂಢ ಪಾಲ್ಗೊಂಡಿದ್ದರು.
ಸಮಾವೇಶದಲ್ಲಿ ಯೋಜನೆ ಬೆಳೆದು ಬಂದ ಹಾದಿ ಚಿನ್ನದ ಹೆಜ್ಜೆಗಳ ಕುರಿತು ವಿಡಿಯೋ ಪ್ರದರ್ಶನ ಮಾಡಲಾಯಿತು.
ತಾಲೂಕು ಯೋಜನಾಧಿಕಾರಿ ಸಚಿನ್ ಸ್ವಾಗತಿಸಿದರು. ತಾಲೂಕು ವಿಚಕ್ಷಣಾಧಿಕಾರಿ ಕೇಶವ್ ನಿರೂಪಿಸಿದರು. ಮೇಲ್ವಿಚಾರಕ ಸಂತೋಷ ನಾಯ್ಕ್ ವಂದಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಒಕ್ಕೂಟಗಳ ಪಧಾದಿಕಾರಿಗಳು, ಮೇಲ್ವಿಚಾರಕರು, ತಾಂತ್ರಿಕ ಸಿಬ್ಬಂದಿಗಳು, ಹಣಕಾಸು ಪ್ರಬಂಧಕರು, ತಾಲೂಕು ನೋಡಲ್ ಅಧಿಕಾರಿ, ನಗದು ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿ.ಎಲ್.ಇ.ಗಳು, ಉಪಸ್ಥಿತರಿದ್ದರು.


