ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದ ನಾಡಕಚೇರಿ ಪಕ್ಕದಲ್ಲಿ ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು ಶ್ರಮಿಸಬೇಕು. ಕೆಲ ಕಾರಣಗಳಿಂದ ಹಣ ಹಾಕುವದು ವಿಳಂಭವಾದರು ಯಾವುದೇ ಫಲಾನುಭವಿಗಳಿಗೆ ಸರಕಾರದ ಯೋಜನೆಗಳಿಂದ ವಂಚಿತರಾಗದಂತೆ ನಿಗಾವಹಿಸಬೇಕು ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡಿದೆ. ಯಾರಾದರು ಸೌಲಭ್ಯದಿಂದ ಉಳಿದುಕೊಂಡಿದ್ದರೆ ಕಾರ್ಯಾಲಯಕ್ಕೆ ಭೇಟಿ ನೀಡಿ ಅದನ್ನು ಸರಿಪಡಿಸಿಕೊಂಡು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ,ಶಿಶು ಅಭಿವೃದ್ದಿ ಅಧಿಕಾರಿ ಶಂಕರ ಕುಂಬಾರ, ಹೆಸ್ಕಾಂ ಎಇಇ ಶಿವಪ್ರಕಾಶ ಕರಡಿ, ಸಾರಿಗೆ ಘಟಕ ವ್ಯವಸ್ಥಾಪಕ ಎಚ್.ಆರ್. ಪಾಟೀಲ,
ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಜಿ.ಬಿ ರಂಗನಗೌಡ್ರ, ಸದಸ್ಯರು ಕೆಂಪಣ್ಣ ಕ್ವಾರಿ, ಸುರೇಖಾ ಸೋಮಗೊಂಡ, ದುಂಡಪ್ಪ ಬೂದಿ, ರೂಪಾ ಅರಮನಿ, ನವೀನ ನಲವಡೆ, ರೂಪಾ ಯಲಿಗೋಡ, ಸಂಜೀವ ಹಿರೇಮಠ, ಶ್ರೀಶೈಲ ಪಟ್ಟಣಶೆಟ್ಟಿ, ಪತ್ರೇಪ್ಪ ಕೊಪ್ಪದ, ಕೃಷ್ಣ ರಾಠೋಡ್, ದಯಾನಂದ ತಳವಾರ, ರವಿ ದೊಡಮನಿ, ಮಹಮ್ಮದಶೆಫಿ ಫನಿಬಂದ, ಬಸಪ್ಪ ಮಾದರ, ಸೇರಿದಂತೆ ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಪುರಸಭೆಯ ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು
