ಬೆಳಗಾವಿ ತಹಶೀಲ್ದಾರ್ ಕಚೇರಿಯ ಚೇಂಬರ್ ನಲ್ಲೇ FDC ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ

WhatsApp Group Join Now

ನಿನ್ನೆಯಷ್ಟೆ ರುದ್ರೇಶ್ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ ನಾಗರಾಳ ಅವರ ಕಚೇರಿಯಲ್ಲಿ ಎಸ್ ಡಿಎ ರುದ್ರೇಶ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

About The Author