ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ನಿರ್ಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮ್ಯಾರ್ಟಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಹಾಗೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ವಸತಿ ನಿಲಯಗಳನ್ನು ಆರಂಭಿಸಿ ಸೌಲಭ್ಯ ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಸುರೇಬಾನ ಹೋಬಳಿಯ ಸುಮಾರು ೩೦ ಹಳ್ಳಿಗಳ ವ್ಯಾಪ್ತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳÀ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇಂದು ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಲಾಗುತ್ತಿದೆ ಸುರೇಬಾನ ಸುತ್ತಲಿನ ಹಿಂದುಳಿದ ವರ್ಗದ ಬಡ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.
ಸಾನಿಧ್ಯ ವಹಿಸಿದ್ದ ಅವರಾದಿ ಫಲಾರೇಶ್ವರ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ಈ ಭಾಗದ ಸಾವಿರಾರು ಮಕ್ಕಳಿಗೆ ವಸತಿ ನಿಲಯ ಕಟ್ಟಡದ ಉದ್ಘಾಟನೆಯಿಂದ ಅನುಕೂಲವಾಗಲಿದೆ. ಶಾಸಕ ಪಟ್ಟಣ ಅವರ ಹಿಂದುಳಿದ ಬಡ ಜನರ ಮೇಲಿನ ಪ್ರೀತಿ ಮತ್ತು ಶಿಕ್ಷಣಕ್ಕೆ ಇರುವ ಕಾಳಜಿ ತೋರಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲ್ಲಿ ಸುರೇಬಾನ ಗ್ರಾಪಂ ಅಧ್ಯಕ್ಷೆ ನಾಗರತ್ನ ಜಡಿ, ಮನಿಹಾಳ ಗ್ರಾ.ಪಂ. ಅಧ್ಯಕ್ಷೆ ಹನಮವ್ವ ಪಿಡ್ಡನ್ನವರ, ಉಪಾಧ್ಯಕ್ಷೆ ಹನುಮವ್ವ ಪ್ಯಾಟಿ, ಮುಖಂಡರಾದ ಬಿ.ಜಿ. ರಂಗನಗೌಡ್ರ, ಪರಪ್ಪ ಜಂಗವಾಡ, ಗಿರಿಯಪ್ಪ ಹನಸಿ, ಶಂಕ್ರಯ್ಯ ಚಿಕ್ಕಮಠ, ಸುರೇಬಾನ-ಮನಿಹಾಳ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ಮುಖಂಡರು ಇದ್ದರು.
ಸರಕಾರಿ ಪ್ರೌಢ ಶಾಲೆ ಶಿಕ್ಷಕ ರಮೇಶ ಮೋಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಕ್ಕ ಮಾದರ ಸಾಗತಿಸಿದರು. ಲಕ್ಷ್ಮಣ ಮೋಟೆ ನಿರೂಪಿಸಿದರು. ರತ್ನಾ ಮೇಟಿ ವಂದಿಸಿದರು.

About The Author