ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅಗತ್ಯ: ಎಚ್.ಎನ್.ಬಾವಿಕಟ್ಟಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಡಿ.೪ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ, ಸ್ಥಳೀಯರು ವಿವಿಧ ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕೆಂದರು.
ಸ್ಥಳೀಯ ಗ್ರಾಮಸ್ಥರಲ್ಲಿ ಮನವಿ: ಗೋಕಾಕ ತಾಪಂ ಇಒ ಪರುಶುರಾಮ ಘಸ್ತೆ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಬೆಟಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಗ್ರಾಪಂ ಸಿಬ್ಬಂದಿ ತೆರಳಿ ಕರ ಪಾವತಿಸಿಕೊಳ್ಳುವ ಕಾರ್ಯಕೈಗೊಂಡಿದ್ದಾರೆ. ಗ್ರಾಮದ ಗ್ರಾಮಸ್ಥರು ತಮ್ಮ ಮನೆ, ಅಂಗಡಿ, ಮುಂಗ್ಗಟ್ಟುಗಳ ಹಾಗೂ ಮತ್ತೀತರ ಕರಗಳನ್ನು ಸ್ಥಳೀಯ ಗ್ರಾಮ ಪಂಚಾಯ್ತಿ ಸಿಬ್ಬಂದಿ ಅವರಲ್ಲಿ ಕೊಡಲೇ ಪಾವತಿಸಿಕೊಳ್ಳಬೇಕು ಎಂದು ಇಲ್ಲಿಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
