ಬೆಳಗಾವಿ ರಾಜ್ಯದ ಗ್ರಾಮ ಪಂಚಾಯತ್ವ್ಯಾ ಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್ ನಲ್ಲಿಂದು ಹೇಳಿದರು.
ಪ್ರಶೋತ್ತರ ಕಲಾಪದಲ್ಲಿ ಎನ್. ರವಿಕುಮಾರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು. ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.



